ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನ ಕೇಂದ್ರ ತೆರಿಗೆ ಇಲಾಖೆ ಆಗಸ್ಟ್ 5ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದೇ ಕೊನೆಯ ದಿನವಾಗಿತ್ತು. ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇಲ್ಲವೆಂದು ಇಲಾಖೆಯೇ ಸ್ಪಷ್ಟಪಡಿಸಿತ್ತು. ಆದರೆ, ರಿಟರ್ನ್ಸ್ ಸಲ್ಲಿಸುವ ವೆಬ್ ಸೈಟ್`ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲಾಗಿದೆ ಎಂದು ಐಟಿ ಇಲಾಖೆ ಸ್ಪಷ್ಟಪಡಿಸಿದೆ.