ಈ ಬಾರಿಯ ಜಿ20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಗೈರಾಗಿರುವುದಕ್ಕೆ ಕಾರಣವೇನಿರಬಹುದು ಎಂಬ ಪ್ರಶ್ನೆಗೆ ಜೈಶಂಕರ್ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ.‘ಕಳೆದ 15-20 ವರ್ಷಗಳಲ್ಲಿ ಜಾಗತೀಕರಣದ ಅಸಮಾನತೆಯಿಂದಾಗಿ ತೀವ್ರಮಟ್ಟದಲ್ಲಿ ಅಸಮಾಧಾನ ಮಡುಗಟ್ಟುತ್ತಾ ಬಂದಿದೆ. ತಮ್ಮ ಮಾರುಕಟ್ಟೆಗಳಿಗೆ ಬಹಳ ಅಗ್ಗದ ಸರಕುಗಳು ಬಂದು ಬೀಳುತ್ತಿರುವುದು ಬಹಳ ದೇಶಗಳಿಗೆ ಕಿರಿಕಿರಿಯಾಗುತ್ತಿದೆ,’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು ಚೀನಾವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.ತಾನು ಪಾಶ್ಚಿಮಾತ್ಯ ದೇಶಗಳ ಪರವಾಗಿ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಅವರು,