ತಮಿಳುನಾಡು ರಾಜಕಾರಣದಲ್ಲಾಗಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಜಯಲಲಿತಾ ಆಪ್ತೆ, ತಮಿಳುನಾಡು ಸರ್ಕಾರದ ಹಿರಿಯ ಸಲಹೆಗಾರರಾಗಿದ್ದ ಶೀಲಾ ಬಾಲಕೃಷ್ಣನ್ (62) ಶುಕ್ರವಾರ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ. ಮುಖ್ಯಮಂತ್ರಿಯ ಕಾರ್ಯದರ್ಶಿಗಳಾಗಿದ್ದ, ಜಯಾ ಆವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಎನ್ ವೆಂಕಟರಮಣನ್, ಎ ರಾಮಲಿಂಗಮ್ ಅವರಿಗೂ ಗೇಟ್ ಪಾಸ್ ನೀಡಲಾಗಿದೆ. ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಶೀಲಾ ಬಾಲಕೃಷ್ಣನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದ್ದು, ಮತ್ತಿಬ್ಬರು ಅಧಿಕಾರಿಗಳಿಗೆ ಸ್ಥಾನ ತ್ಯಜಿಸುವಂತೆ ಸರ್ಕಾರದ ಕಡೆಯಿಂದಲೇ ಸೂಚಿಸಲಾಗಿದೆ. ಈ