ಅನಾರೋಗ್ಯಕ್ಕೀಡಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ, ಜೆ ಜಯಲಲಿತಾ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿ ಹರಿದು ಬಂದಿದೆ. ಅವರು ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಮೂಲಗಳು ಇದನ್ನು ಖಚಿತ ಪಡಿಸಿವೆ. ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಸೆಪ್ಟೆಂಬರ್ 22ರಂದು ನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರು ಕಿಡ್ನಿ ಸಮಸ್ಯೆ ಮತ್ತು ಅಧಿಕ ಮಧುಮೇಹದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ತೆರಳಲಿದ್ದಾರೆ ಎಂಬ