ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಅವರನ್ನು ಜೆಡಿಯು ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 29 ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.