ರಾಂಚಿ|
Rajesh patil|
Last Updated:
ಬುಧವಾರ, 9 ಆಗಸ್ಟ್ 2017 (15:25 IST)
ಆಘಾತಕಾರಿ ಘಟನೆಯೊಂದರಲ್ಲಿ, ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿ ಮೊಬೈಲ್ ಕಳ್ಳತನ ಮಾಡಿದ್ದಾಳೆ ಎಂದು ಆರೋಪಿಸಿದ ಇತರ ವಿದ್ಯಾರ್ಥಿನಿಯರು ಆಕೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದಲ್ಲದೇ ಸಂಪೂರ್ಣ ಘಟನೆಯನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಹೇಯ ಕೃತ್ಯ ಎಸಗಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ವಿದ್ಯಾರ್ಥಿನಿಯರು ತಾವು ಚಿತ್ರಿಸಿಕೊಂಡು ವಿಡಿಯೋವನ್ನು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ಹರಿದು ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆ ಆಗಸ್ಟ್ 4 ರಂದು ಸಂತಾಲ್ ಪರ್ಗಾನಾ ಮಹಿಳಾ ಕಾಲೇಜಿನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಬುಡಕಟ್ಟು ವಿದ್ಯಾರ್ಥಿನಿಯ
ನಗ್ನ ಚಿತ್ರಗಳ ವಿಡಿಯೋ ಬಹಿರಂಗವಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ನಾನು 500 ರೂಪಾಯಿಗಳನ್ನು ನೀಡಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಖರೀದಿಸಿದ್ದೇನೆ. ಆದರೆ. ಹಾಸ್ಟೇಲ್ನಲ್ಲಿರು ವ ಕೆಲ ವಿದ್ಯಾರ್ಥಿನಿಯರು ನನ್ನ ಮೊಬೈಲ್ನ್ನು ಕದ್ದ ಮೊಬೈಲ್ ಎಂದು ಆರೋಪಿಸಿದ್ದಾಗಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.
ವಿದ್ಯಾರ್ಥಿಗಳು ನಂತರ ವಿದ್ಯಾರ್ಥಿ ಕೌನ್ಸಿಲ್ ಸಭೆ ಕರೆದು. 18,600 ರೂ ದಂಡವನ್ನು ಪಾವತಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ನಗ್ನ ವೀಡಿಯೊವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದರು ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ಬುಡಕಟ್ಟು ಸಮುದಾಯದ ವಿದ್ಯಾರ್ಥಿನಿಯ ತಂದೆ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಪುತ್ರಿಗೆ ನ್ಯಾಯ ದೊರೆಯದಿದ್ದಲ್ಲಿ ಆಕೆಯೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರ ಮುಂದೆ ಬೆದರಿಕೆಯೊಡ್ಡಿದ್ದಾನೆ..
ಏತನ್ಮಧ್ಯೆ, ಘಟನೆಯ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ರಘುಬರ್ ದಾಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.