ಲಕ್ನೋ : ವಾರಣಾಸಿ ಜ್ಞಾನವಾಪಿ ಮಸೀದಿಯ ಒಳಗಡೆ ಪೂಜೆ ಮಾಡುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಸಿವಿಲ್ ಅರ್ಜಿಯನ್ನು ಪ್ರಶ್ನಿಸಿ ಮುಸ್ಲಿಂ ಸಮಿತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ರಾಖಿಸಿಂಗ್ ಸೇರಿ ಐವರು ಮಹಿಳೆಯರು ಮಸೀದಿ ಆವರಣದಲ್ಲಿ ಇದೆ ಎನ್ನಲಾಗುತ್ತಿರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ವಾರಣಾಸಿ ಜಿಲ್ಲಾ