ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಅನಮೋಲ್ ರತನ್ ಬುಧವಾರ ಪೊಲೀಸರಿಗೆ ಶರಣಾಗಿದ್ದಾನೆ. ಬುಧವಾರ ರಾತ್ರಿ 10.15ಕ್ಕೆ ಆರೋಪಿ ಅನಮೋಲ್ ದಕ್ಷಿಣ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ಗುರುವಾರ ಪಟಿಯಾಲಾ ಹೌಸ್ ಕೋರ್ಟ್ಗೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಜವಾಹರಲಾಲ್ ವಿಶ್ವವಿದ್ಯಾಲಯದ 28 ವರ್ಷದ ಸಂಶೋಧನಾ ವಿದ್ಯಾರ್ಥಿಯೋರ್ವಳು ತನ್ನ ಸೀನಿಯರ್ ಅತ್ಯಾಚಾರ