ನವದೆಹಲಿ : ಈ ಹಿಂದೆ ಕೇಂದ್ರ ಸಚಿವರಾಗಿದ್ದ ಜೆ.ಪಿ. ನಡ್ಡಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲು ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೆ.ಪಿ. ನಡ್ಡಾ(58) ಅವರು ಹಿಂದಿನ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜವಾಬ್ದಾರಿಯನ್ನು ಹೊತ್ತು, ಪ್ರತಿಪಕ್ಷಗಳ ವಿರೋಧದ ನಡುವೆಯೂ ಬಿಜೆಪಿಯು ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸಲು ಕಾರಣರಾಗಿದ್ದರು.