ನವದೆಹಲಿ: ರಾಷ್ಟ್ರ ಮಟ್ಟದ ಕಬ್ಬಡ್ಡಿ ಆಟಗಾರ ರೋಹಿತ್ ಚಿಲ್ಲರ್ ಅವರ ಪತ್ನಿ ತಮ್ಮ ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ನಂಗೋಲಿ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಲಲಿತಾ(27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ತಂದೆಯನ್ನುದ್ದೇಶಿಸಿ ಎರಡು ಪುಟದ ಡೆತ್ ನೋಟ್ ಬರೆದಿಟ್ಟಿರುವ ಲಲಿತಾ, ಪತಿ