ಚೆನ್ನೈ: ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿರುವ ಬಹುಭಾಷಾ ತಾರೆ ಕಮಲ್ ಹಾಸನ್ ಇದೀಗ ತಮ್ಮ ಪಕ್ಷದ ಲಾಂಚಿಂಗ್ ಕಾರ್ಯಕ್ರಮವನ್ನು ನಾಳೆ ಮಧುರೈನಲ್ಲಿ ಅದ್ಧೂರಿಯಾಗಿ ನಡೆಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಮಲ್, ಈಗಾಗಲೇ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಆಹ್ವಾನಿಸಿದ್ದಾರೆ. ಅದರ ಜತೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಾ ಆಗಮಿಸಲಿದ್ದಾರೆ ಎಂಬ ಸುದ್ದಿ ಬಂದಿದೆ.ರಾಜಕೀಯ ಜೀವನಕ್ಕೆ ಕಾಲಿಡುವುದಾಗಿ ಘೋಷಿಸಿದ ಸಂದರ್ಭದಲ್ಲಿಯೇ ಕೇಜ್ರಿವಾಲ್ ರನ್ನು ಕಮಲ್ ಭೇಟಿಯಾಗಿ ಮಾತುಕತೆ ನಡೆಸಿದ್ದರು.