ಬೆಂಗಳೂರು: ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ದೇಶದಲ್ಲಿ ಹೆಚ್ಚುತ್ತಲೇ ಇದೆ. ಮೊದಲ ಬಲಿ ಪಡೆದಿದ್ದ ಕರ್ನಾಟಕ ಈಗ ಸೋಂಕಿತ ರಾಜ್ಯಗಳ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?ಆರಂಭದಲ್ಲಿ 3 ನೇ ಸ್ಥಾನದಲ್ಲಿದ್ದ ಕರ್ನಾಟಕದ ಸ್ಥಿತಿ ಗಂಭೀರವಾಗಬಹುದು ಎಂದೇ ಲೆಕ್ಕಾಚಾರವಾಗಿತ್ತು. ಆದರೆ ಸೂಕ್ತ ಸಮಯದಲ್ಲಿ ನಿಯಂತ್ರಣ ಹೇರಿದ ಕಾರಣ ಈಗ ಹತ್ತನೇ ಸ್ಥಾನದಲ್ಲಿದೆ.ಕರ್ನಾಟಕದಲ್ಲಿ ಇದುವರೆಗೆ 144 ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ 4 ಮಂದಿ ಸಾವನ್ನಪ್ಪಿದ್ದು ಹಲವರು ಚೇತರಿಕೆಯ ಹಾದಿಯಲ್ಲಿದ್ದಾರೆ. ಇನ್ನು,