ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ರಾಜೀನಾಮೆಯನ್ನು ಆಗ್ರಹಿಸಿ ಕೇರಳ ಕಾಂಗ್ರೆಸ್ ಘಟಕವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿವಾದಾತ್ಮಕ ಪೋಸ್ಟ್ ರಾಷ್ಟ್ರಮಟ್ಟದಲ್ಲಿ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಯಿತು. ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಪಕ್ಷವು ಆ ಪೋಸ್ಟ್ ಅನ್ನು ತಕ್ಷಣವೇ ಡಿಲಿಟ್ ಮಾಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಸಂಸದ ಹಾಗೂ ವಕ್ತಾರ ಪವನ್ ಖೇರಾ, ಪಕ್ಷಕ್ಕೂ ಆ ಪೋಸ್ಟ್ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದು, ನ್ಯಾಯಾಂಗದ