ತಿರುವನಂತಪುರಂ: ಕೇರಳದಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಒಂದೇ ದಿನ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಬಗ್ಗೆ ಜನರಲ್ಲಿ ಭಾರೀ ಕುತೂಹಲವಿದೆ.ಪ್ರತೀ ಬಾರಿಯೂ ಕೇರಳದಲ್ಲಿ ಯುಡಿಎಫ್ ಮತ್ತು ಎಲ್ ಡಿಎಫ್ ಒಂದಾದ ಮೇಲೊಂದರಂತೆ ಆಡಳಿತ ನಡೆಸಿವೆ. ಆದರೆ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಸ್ಪಷ್ಟ ಬಹುಮತ ಸಿಗುವುದು ಅನುಮಾನ ಎನ್ನಲಾಗುತ್ತಿದೆ.ಅತ್ತ ಬಿಜೆಪಿಗೆ ಕನ್ನಡಗಿರು ಹೆಚ್ಚಾಗಿರುವ ಮಂಜೇಶ್ವರ ಕ್ಷೇತ್ರದ ಮೇಲೆ ಕಣ್ಣಿದೆ.