ಕಾಸರಗೋಡು : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ನಡುವಣ ಸಂಚಾರ ನಿರ್ಬಂಧ ತೆರವುಗೊಳಿಸಲಾಗಿದೆ. ಕೇರಳದಲ್ಲಿ ಕೋವಿಡ್ ಪಾಸಿಟಿವ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂಜಾಗ್ರತಾ ಕ್ರಮವಾಗಿ ಗಡಿ ಮೂಲಕ ಸಂಚಾರ ನಿರ್ಬಂಧ ಹೇರಿತ್ತು. ಲಾಕ್ಡೌನ್ ತೆರವುಗೊಳಿಸಿದರೂ ನಿರ್ಬಂಧ ಹೇರಿದ್ದಲ್ಲದೆ ದ. ಕ. ಪ್ರವೇಶಕ್ಕೆ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿತ್ತು. ಇದರಿಂದಾಗಿ ಕರ್ನಾಟಕವನ್ನೇ ಆಶ್ರಯಿಸಿರುವ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ಇತರ ಉದ್ದೇಶಕ್ಕಾಗಿ ಸಂಚರಿಸುವವರಿಗೆ ಅನನುಕೂಲವಾಗಿತ್ತು. ದ. ಕ. ಜಿಲ್ಲಾಧಿಕಾರಿಗಳು