ನವದೆಹಲಿ : ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಬೈಡೆನ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕಾಕ್ಕೆ ಹೊರಡಲಿರುವ ಮೋದಿಯವರು, ಕ್ವಾಡ್ ಶೃಂಗ ಸಮ್ಮೇಳನ, ವಿಶ್ವಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ