ನವದೆಹಲಿ : ಕೋವಿಡ್ ಸಮಯದಲ್ಲಿ 5 ಲಕ್ಷ ಅಲ್ಲ, ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.ಈ ಬಗ್ಗೆ ಟ್ವಿಟ್ಟರ್ನಲ್ಲಿ ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸತ್ಯವನ್ನು ಮಾತನಾಡುವುದಿಲ್ಲ, ಇತರರಿಗೂ ಮಾತನಾಡಲು ಬಿಡುವುದಿಲ್ಲ.ಕೋವಿಡ್ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಯಾರೂ ಸತ್ತಿಲ್ಲ ಎಂದು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಹೆಚ್ಒ) ಶನಿವಾರ