Widgets Magazine

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ; ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ

ನವದೆಹಲಿ| pavithra| Last Modified ಬುಧವಾರ, 15 ಜನವರಿ 2020 (10:23 IST)
ನವದೆಹಲಿ : ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.ಈ ವಿಚಾರವಾಗಿ ಸಿದ್ದರಾಮಯ್ಯ ನಿನ್ನೆಯಷ್ಟೇ ಕೆಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮ್ಮ ಆಪ್ತ ಎಂ.ಬಿ.ಪಾಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಆದರೆ ಇಂದು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ನಿರ್ಧರಿಸಿರುವ ಸಿದ್ದರಾಮಯ್ಯ ರಾಹುಲ್ ಭೇಟಿಗೆ ಸಮಯ ನಿಗದಿಯಾಗದ ಹಿನ್ನಲೆಯಲ್ಲಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಅವರನ್ನು ಭೇಟಿ ಮಾಡಿದ ಬಳಿಕ ರಾಜ್ಯಕ್ಕೆ ವಾಪಾಸಾಗಲಿದ್ದಾರೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :