ತಿರುವನಂತಪುರಂ : ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ ಸಂಸ್ಥೆಯು ಪಿಎಫ್ಐನಿಂದ 5.06 ಕೋಟಿ ಪರಿಹಾರ ಕೇಳಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.ಕಳೆದ ಸೆಪ್ಟೆಂಬರ್ 23ರಂದು ಎನ್ಐಎ 15 ರಾಜ್ಯಗಳಲ್ಲಿ 93 ಕಡೆ ನಡೆಸಿದ ದಾಳಿಯಲ್ಲಿ ನೂರಾರು ಪಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಹಲವರನ್ನು ಬಂಧಿಸುವ ಕೆಲಸ