ಬೆಂಗಳೂರು : ಬಿಜೆಪಿಗೆ ಸಹಾಯ ಮಾಡಲು ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಕುಮಾರಸ್ವಾಮಿ ಡೀಲ್ ಮಾಡಲು ಅಭ್ಯರ್ಥಿ ಹಾಕಿದ್ದಾರೆ. ಕುಮಾರಸ್ವಾಮಿ ಒಬ್ಬ ಡೀಲರ್ ಎಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಅ.30ರಂದು ಸಿಂದಗಿ, ಹಾನಗಲ್ ಉಪಚುನಾವಣೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ದೆಹಲಿಯಿಂದ ಬರ್ತಿದ್ದಂತೆ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜಮೀರ್ ಕೆಂಡಕಾರಿದ್ದಾರೆ. ಅಲ್ಪ ಸಂಖ್ಯಾತರಿಗೆ ಸಿದ್ದರಾಮಯ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಮಾಡಿದಷ್ಟು ಒಳ್ಳೇ ಕೆಲಸ ಯಾರು ಮಾಡಲಿಲ್ಲ.