ಹೊಸದಿಲ್ಲಿ, ಅ. 20 : ರೈತರ ಪ್ರತಿಭಟನೆ ಸಂದರ್ಭ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾದ ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದ ವಿಚಾರಣೆಯನ್ನು ಬುಧವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 8 ಮಂದಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ ಕುರಿತಂತೆ ಉತ್ತರಪ್ರದೇಶ ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅಕ್ಟೋಬರ್ 8ರಂದು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ