ಪಾಟ್ನಾ : ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ.ಆದರೆ ಇವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥರಲ್ಲ. ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.ಅಂದಿನ ಬಿಹಾರದ