ಬೆಂಗಳೂರು : ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿಹೋಯ್ತು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ತಿಳಿಸಿದರು.ಇದೇ ವೇಳೆ ಡಿಕೆಶಿ ಹೇಳಿಕೆಗೆ