ಚಂಡೀಗಢ : ಗುರು ರವಿದಾಸ್ ಜಯಂತಿ ಇರುವುದರಿಂದ ಫೆಬ್ರವರಿ 14ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮನವಿ ಮಾಡಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿರುವ ಪಂಜಾಬ್ ಸಿಎಂ, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.32 ರಷ್ಟು ಇರುವ ಪರಿಶಿಷ್ಟ ಜಾತಿ ಸಮುದಾಯದ ಕೆಲವು ಪ್ರತಿನಿಧಿಗಳು, ಗುರು ರವಿದಾಸ್ ಅವರ ಜನ್ಮದಿನ ಫೆಬ್ರವರಿಯಲ್ಲೇ ನಡೆಯಲಿದೆ