ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ಸ್ಥಳದಲ್ಲೇ ಸಾವು

ಮಧ್ಯಪ್ರದೇಶ| Ramya kosira| Last Modified ಶುಕ್ರವಾರ, 10 ಸೆಪ್ಟಂಬರ್ 2021 (10:29 IST)
: ಮಧ್ಯಪ್ರದೇಶದಲ್ಲಿ ತಡರಾತ್ರಿ ಭೀಕರ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಛಿಂದ್ವಾರಾದ ಬೆತುಲ್ ರಿಂಗ್ ರೋಡ್ ನಲ್ಲಿ ಐಸರ್ ಟ್ರಕ್ ಸ್ವಿಫ್ಟ್ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.> ಸ್ವಿಫ್ಟ್ ಕಾರಿನಲ್ಲಿದ್ದವರು ನಾಗಪುರದಿಂದ ಉಮ್ರೆತ್ ಗೆ ತೆರಳುತ್ತಿದ್ದರು ಈ ವೇಳೆ ಹಿಂದಿನಿಂದ ಬಂದ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.>  


ಇದರಲ್ಲಿ ಇನ್ನಷ್ಟು ಓದಿ :