ಗುವಾಹಟಿ : ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ಇಬ್ಬರು ಧರ್ಮಗುರುಗಳ ಬಂಧನದ ಬೆನ್ನಲ್ಲೇ ಅಸ್ಸಾಂನಲ್ಲಿ ಹೊರ ರಾಜ್ಯಗಳಿಂದ ಬರುವ ಧರ್ಮಗುರುಗಳು ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅಸ್ಸಾಂ ಮಸೀದಿಗಳು ಮತ್ತು ಮದರಸಾಗಳಲ್ಲಿನ ಧರ್ಮಗುರುಗಳು ರಾಜ್ಯದ ಹೊರಗಿನಿಂದ ಬಂದರೆ ಸರ್ಕಾರಿ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ ಎಂದು ಸಿಎಂ ಸೂಚಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಮಸೀದಿಯಲ್ಲಿ ಇಮಾಮ್ ಆಗಿ ಕೆಲಸ ಮಾಡುತ್ತಿದ್ದ. ಹಲವು ಗ್ರಾಮಗಳಲ್ಲಿ ಜಿಹಾದಿ ಜಾಲವನ್ನು