ಡೆಲ್ಲಿ: ಮಹಾತ್ಮ ಗಾಂಧಿ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಆರ್ಎಸ್ಎಸ್ ನಡುವಿನ ವಿವಾದ ಮತ್ತಷ್ಟು ಕಗ್ಗಂಟಾಗಿದೆ. ರಾಹುಲ್ ಗಾಂಧಿ ಆರ್ಎಸ್ಸೆಸ್ ವಿರುದ್ಧ ಹೇಳಿಕೆ ಹಿಂತೆಗೆದುಕೊಳ್ಳಲು ಸುತಾರಾಂ ಒಪ್ಪುತ್ತಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಕ್ಷಮಾಪಣೆ ಕೇಳುವ ತನಕ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿರುವ ಮಹಾರಾಷ್ಟ್ರ ಮೂಲದ ಆರ್ಎಸ್ಎಸ್ ನಾಯಕ ರಾಜೇಶ್ ಮಹದೇವ್ ಕುಂಟೆ ಖಡಾಖಂಡಿತವಾಗಿ ಹೇಳಿದ್ದಾರೆ.