ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ಹಾಗೂ ನಿರ್ಮಾಪಕ ವಿಜಯ್ ಬಾಬು ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದು, ಇದಕ್ಕೂ ಮುನ್ನ ಜುಲೈ ೨೨ರಂದು ವಿಜಯ್ ಬಾಬು ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು. ಸಿನಿಮಾದಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ನಟಿ ಜೊತೆ ವಿಜಯ್ ಬಾಬು ಲೈಂಗಿಕ ಸಂಪರ್ಕ ಬೆಳೆಸಿದ್ದರು. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಕೂಡ ವಿಜಯ್ ಅವರನ್ನು ರಾಜ್ಯ ಬಿಟ್ಟು ಹೋಗದಂತೆ ಸೂಚಿಸಿದ್ದು,