ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ ಬುಧವಾರ ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಉಪಸ್ಥಿತಿಯಲ್ಲಿ ಅವರು ಕಮಲಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ನಖ್ವಿ, ಸುರೇಶ್ ಗೋಪಿ ಸೇರ್ಪಡೆಯಿಂದ ಪಕ್ಷ ರಾಜ್ಯದಲ್ಲಿ ಮತ್ತಷ್ಟು ಬಲಗೊಳ್ಳಲಿದೆ ಎಂದರು. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಕಳೆದ ಎಪ್ರಿಲ್ ತಿಂಗಳಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದರು. ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ