ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದ ಸುಪ್ರೀಂ ತೀರ್ಪನ್ನು ಖಂಡಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ| pavithra| Last Modified ಸೋಮವಾರ, 10 ಫೆಬ್ರವರಿ 2020 (09:11 IST)
ನವದೆಹಲಿ : ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸುವುದಾಗಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಶುಕ್ರವಾರ ಮೀಸಲಾತಿಯ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮೀಸಲಾತಿ ಎಂಬುದು ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿತ್ತು. ಈ ಬಗ್ಗೆ ಅಸಮಾಧಾನ ಹೊರಹಾಕಿದ ಮಲ್ಲಿಕಾರ್ಜುನ ಖರ್ಗೆ, ಮೀಸಲಾತಿಗೆ ಸಂಬಂಧಿಸಿದಂತೆ ಸಂವಿಧಾನದ 16ನೇ ವಿಧಿ ಈಗಾಗಲೇ ಇದೆ. ಇದಕ್ಕೆ ನೀಡುವ ಸಲುವಾಗಿ 16(4), 16(4ಬಿ) ಸಹ ಇದೆ. ಆದರೂ ಸುಪ್ರೀಂ ಕೋರ್ಟ್ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ತೀರ್ಪು ನೀಡಿರುವುದು ಅಚ್ಚರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ದೇಶದಲ್ಲಿ ಪರಿಶಿಷ್ಟರ ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನ ನಡೆಯುತ್ತಿದೆ, ಬಿಜೆಪಿ ಸರ್ಕಾರ ಿರುವ ಕಡೆ  ಇಂಥ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :