ನವದೆಹಲಿ (ಅ. 22) : ಮುಂದಿನ ವರ್ಷದ ಮಾರ್ಚ್ - ಏಪ್ರಿಲ್ ತಿಂಗಳಲ್ಲಿ ಉತ್ತರ ಪ್ರದೇಶ, ಪಂಜಾಬ್ ಮಣಿಪುರ ಉತ್ತರಾಖಂಡ ಮತ್ತು ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಪೈಕಿ 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದರೆ ಎರಡು ಪ್ರಮುಖ ಪ್ರತಿಪಕ್ಷಗಳಾದ ಆಮ್ ಆದ್ಮಿಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳ ನೆಲೆ ವಿಸ್ತರಣೆ ಆಗುವ ದೃಷ್ಟಿಯಿಂದ ಗೋವಾ ವಿಧಾನಸಭಾ ಚುನಾವಣೆ ಅತ್ಯಂತ ಕುತೂಹಲಕಾರಿಯಾಗಿದೆ.