ಮೂವರು ಬಾಲಕರನ್ನು ಬೆತ್ತಲೆಗೊಳಿಸಿ ಥಳಿಸಿದ್ದಕ್ಕೆ ವ್ಯಕ್ತಿಯ ಬಂಧನ

ಮುಂಬೈ| Krishnaveni K| Last Modified ಸೋಮವಾರ, 22 ಫೆಬ್ರವರಿ 2021 (09:43 IST)
ಮುಂಬೈ: ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರು ಬಾಲಕರನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಥಳಿಸಿದ್ದಲ್ಲದೆ, ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಕ್ಕೆ ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

 
ಯುವತಿಯರ ಪಾಲಕರು ಬಾಬು ಎಂಬಾತನಿಗೆ ದೂರು ನೀಡಿದ್ದರು. ಈ ಸಂಬಂಧ ಬಾಬು ಆ ಬಾಲಕರನ್ನು ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿಸಿ ಥಳಿಸಿದ್ದಾನೆ. ಅಲ್ಲದೆ, ಈ ಘಟನೆಯನ್ನು ಆತನ ಸಹಾಯಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇದು ವೈರಲ್ ಆಗುತ್ತಿದ್ದಂತೇ ಪೊಲೀಸರ ಗಮನಕ್ಕೆ ಬಂದಿದ್ದು, ಸ್ವಯಂಪ್ರೇರಿತವಾಗಿ ಬಾಬು ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :