ಹೈದರಾಬಾದ್: ಹೆತ್ತವರ ವಿರುದ್ಧವೇ ಸುಳ್ಳು ಕೇಸ್ ಹಾಕಿ ಜೈಲಿಗೆ ಹಾಕಲು ನೋಡಿದ ಮಗನನ್ನು ಪೊಲೀಸರು ಬಂಧಿಸಿದ ಪ್ರಕರಣ ಹೈದರಾಬಾದ್ ನಲ್ಲಿ ನಡೆದಿದೆ.ಕೆಲವು ದಿನಗಳ ಹಿಂದೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ನನ್ನ ಸಹೋದರನನ್ನು ಹೆತ್ತವರೇ ಕೊಂದಿದ್ದಾರೆ ಎಂದು ಸುಳ್ಳು ದೂರು ನೀಡಿದ್ದ. ಇದರ ವಿಚಾರಣೆ ನಡೆಸಿದ ಪೊಲೀಸರಿಗೆ ಆತ ನೀಡಿದ ದೂರು ಸುಳ್ಳು ಎಂದು ಗೊತ್ತಾಗಿದೆ.ಅಂತಹ ಯಾವುದೇ ಕೊಲೆ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆತನ ಸಹೋದರ ಅನಾರೋಗ್ಯದಿಂದ ಸಾವನ್ನಪ್ಪಿದ್ದ.