ನವದೆಹಲಿ: ಶಾಲಾ ಬಾಲಕಿಯೊಬ್ಬಳನ್ನು ರಸ್ತೆಯಲ್ಲೇ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.ಬಿಹಾರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಸಂಬಂಧ ವಿಡಿಯೋ ಮಾಡಿದ 20 ವರ್ಷದ ಯುವಕ ಪಂಕಜ್ ಯಾದವ್ ನನ್ನು ಬಂಧಿಸಿದ್ದು ಮತ್ತು ವಿಡಿಯೋದಲ್ಲಿ ಬಾಲಕಿಗೆ ಕಿರುಕುಳ ನೀಡಿದ್ದ ಏಳು ಮಂದಿ ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ವಿಡಿಯೋ ಮಾಡಿದ್ದ ಪಂಕಜ್ ಯಾದವ್ ಇದೀಗ ತಪ್ಪೊಪ್ಪಿಕೊಂಡಿದ್ದು, ಆತನ ಜತೆಗಿದ್ದ