ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರಿಂದ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋನಿಯಾ, ರಾಹುಲ್ ಗುಣಗಾನ ಮಾಡಿದ್ದಾರೆ. ರಾಹುಲ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್, 19 ವರ್ಷಗಳ ಕಾಲ ಸೋನಿಯಾ ಗಾಂಧಿ ಕಾಂಗ್ರೆಸ್ ನ್ನು ಸಮರ್ಥವಾಗಿ ಮುನ್ನಡೆಸಿದರು. ನಾನು ಪ್ರಧಾನ ಮಂತ್ರಿಯಾಗಿ 10 ವರ್ಷ ಆಡಳಿತ ಮಾಡಿದ ಸಂದರ್ಭದಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಲಹೆ ಸೂಚನೆ ನೀಡುತ್ತಾ