ನವದೆಹಲಿ: ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಕೊಂದ ಘಟನೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕಿ, ವನ್ಯ ಜೀವಿಗಳ ಹಕ್ಕುಗಳ ಹೋರಾಟಗಾರ್ತಿ ಮನೇಕಾ ಗಾಂಧಿ ಕೇರಳದಲ್ಲಿ ಆನೆಗಳ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಕೇರಳದ ಆನೆ ದುರಂತದ ಬೆನ್ನಲ್ಲೇ ಮನೇಕಾ ನೀಡಿರುವ ವಿವರಗಳು ಬೆಚ್ಚಿ ಬೀಳಿಸುವಂತಿದೆ. ಕೇರಳದಲ್ಲಿ ಪ್ರತಿ ಮೂರು ದಿನಕ್ಕೊಮ್ಮೆ ಆನೆಯೊಂದರ ಹತ್ಯೆಯಾಗುತ್ತಿದೆ. ಅದರಲ್ಲೂ ಮಲಪ್ಪುರಂ ಜಿಲ್ಲೆಯಂತೂ ಅಪರಾಧಗಳ ಗೂಡಾಗಿದೆ