ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಮನೀಶ್ ಸಿಸೊಡಿಯಾ ಅವರನ್ನು ಬಂಧಿಸಲು ಕೇಂದ್ರ ಸರಕಾರ ಸಂಚು ರೂಪಿಸಿದೆ ಎಂದು ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಬಾಂಬ್ ಹಾಕಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ಮುಂದೆ ಮನೀಶ್ ಸಿಸೊಡಿಯಾ ಅವರನ್ನು ಬಂಧಿಸಲಿದೆ ಎಂದು ಅವರು ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,