ಅಮರಾವತಿ : ರೈಲ್ವೆ ಪ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಓರ್ವ ಅಪ್ರಾಪ್ತ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.ನಿನ್ನೆಯಷ್ಟೇ ಇದೇ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ 24 ಗಂಟೆಗಳಲ್ಲಿ ಅದೇ ರೀತಿಯಲ್ಲಿ ಮತ್ತೊಂದು ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ.