ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವರದಿಗಳ ಪ್ರಕಾರ ಬೆಂಕಿ ನಂದಿಸಲು ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿವೆ. ಘಟನೆ ವೇಳೆ ಆಸ್ಪತ್ರೆಯಲ್ಲಿದ್ದ ಎಲ್ಲಾ ರೋಗಿಗಳು ಹಾಗೂ ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಏಮ್ಸ್ನ ತುರ್ತು ಚಿಕಿತ್ಸಾ ವಿಭಾಗದ ಮೇಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ಆಸ್ಪತ್ರೆಯಲ್ಲಿ ಬೆಂಕಿ