ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಸಂಬಂಧ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ NDA ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ್ದಾರೆ. ಬುಡಕಟ್ಟು ಸಮಾಜವು ಪಕ್ಷದ ಹೋರಾಟಗಳಲ್ಲಿ ಪ್ರಮುಖ ಭಾಗವಾಗಿದೆ ಎಂಬ ವಿಚಾರವನ್ನ ಗಮನದಲ್ಲಿಟ್ಟುಕೊಂಡು ನಾವು ಮುರ್ಮುಗೆ ಬೆಂಬಲ ಘೋಷಿಸಿದ್ದೇವೆ ಎಂದು ಮಾಯಾವತಿ ತಿಳಿಸಿದ್ದಾರೆ. ಇದು ಬಿಜೆಪಿ ಅಥವಾ ಕಾಂಗ್ರೆಸ್ ವಿರೋಧಿಸುವ ಬಗ್ಗೆಯಲ್ಲ ಬದಲಾಗಿ ಸಮರ್ಥ ಬುಡಕಟ್ಟು ಸಮುದಾಯದ ಮಹಿಳೆಯನ್ನು ಈ ದೇಶದ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಬೇಕು