ಪಣಜಿ : ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಪುಸಾದಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಗೋವಾದಲ್ಲಿ ಚುನಾವಣಾ ಪ್ರಚಾರ ಮುಗಿಯುವ ಒಂದು ದಿನದ ಮುನ್ನ ಮೋದಿ ಅವರು ಸಂಜೆ 5 ಗಂಟೆಗೆ ಬೋಡ್ಗೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಈಗಾಗಲೇ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ಸುಂದರವಾದ ದೀಪಾಲಂಕಾರ ಮತ್ತು ಬೃಹತ್ ಪೆಂಡಾಲ್ ಜನರಿಗೆ ಪ್ರಮುಖ ಆಕರ್ಷಣೆಯಾಗಲಿದೆ