ಯುವತಿಯೊಬ್ಬಳ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಪಕ್ಕದ್ಮನೆ ಯುವಕ

ಜೈಪುರ| pavithra| Last Modified ಶುಕ್ರವಾರ, 25 ಡಿಸೆಂಬರ್ 2020 (07:32 IST)
: 23 ವರ್ಷದ ಯುವತಿಯೊಬ್ಬಳ ಮೇಲೆ ಯುವಕನೊಬ್ಬ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತ ಯುವತಿಯ ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದು, ಆಕೆ ತನ್ನ ಮನೆಯ ಅಂಗಳದಲ್ಲಿ ಅಜ್ಜಿಯ ಜೊತೆ ಕುಳಿತಿದ್ದಾಗ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ದಾಳಿಯ ಹಿಂದಿನ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :