Widgets Magazine

ಭೂತೋಚ್ಛಾಟನೆ ನೆಪದಲ್ಲಿ 14 ವರ್ಷದ ಹುಡುಗಿಯ ಮೇಲೆ ಮಾನಭಂಗ

ಹೈದರಾಬಾದ್| pavithra| Last Modified ಗುರುವಾರ, 15 ಅಕ್ಟೋಬರ್ 2020 (11:07 IST)
ಹೈದರಾಬಾದ್ : ಭೂತೋಚ್ಛಾಟನೆ ನೆಪದಲ್ಲಿ 14 ವರ್ಷದ ಹುಡುಗಿಯ ಮೇಲೆ 45 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿಗೆ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ವಾಮಾಚಾರ ಮಾಡುತ್ತಿದ್ದ ಆರೋಪಿಯ ಬಳಿ ಆಕೆಯ ಪೋಷಕರು ಕರೆದುಕೊಂಡು ಹೋಗಿದ್ದಾರೆ. ಆ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆತ ಯಾರಿಗಾದರೂ ಹೇಳಿದರೆ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಹುಡುಗಿ ಜನನಾಂಗ ಸೋಂಕಿಗೆ ಒಳಗಾದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :