ಮುಂಬೈ : 23 ವರ್ಷದ ಯುವತಿಯ ಮೇಲೆ ಮಾನಭಂಗ ಎಸಗಿ ತಲೆಗೆ ಭಾರವಾದ ವಸ್ತುವಿನಿಂದ ಹೊಡೆದು ಚಲಿಸುವ ರೈಲಿನಿಂದ ಹೊರಗೆ ತಳ್ಳಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ರೈಲು ಹಳಿಗಳ ಮೇಲೆ ಯುವತಿ ಬಿದ್ದಿರುವುದನ್ನು ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸರು ಯುವತಿಯ ಕುಟುಂಬದವರನ್ನು ಪತ್ತೆ ಹಚ್ಚಿ ವಿಷಯ ತಿಳಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯ ವೈದ್ಯಕೀಯ