ಗಂಡನಿಲ್ಲದ ಹೊತ್ತು ಮನೆಗೆ ಬಂದವರು ಮಹಿಳೆಗೆ ಮಾಡಿದ್ದೇನು?

ಶಹಜಹಾನ್ಪುರ| pavithra| Last Modified ಸೋಮವಾರ, 5 ಏಪ್ರಿಲ್ 2021 (06:57 IST)
ಶಹಜಹಾನ್ಪುರ :ಶಹಜಹಾನ್ಪುರ ಜಿಲ್ಲೆಯ ಮಿರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬಳ ಮೇಲೆ ಮೂವರು ಪುರುಷರು ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ದೇಹಲಿಗೆ ಹೋಗಿದ್ದರು. ಆ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಒಂಟಿಯಾಗಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಹಾಗೇ  ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಆದರೆ ಮಹಿಳೆ ಪತಿಯ ಬಳಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.

ಈ ಬಗ್ಗೆ ಪತಿ ಪೊಲೀಸ್ ಠಾಣಿಯಲ್ಲಿ ದೂರು ನೀಡಿದ್ದು, ಮಹಿಳೆಯ ಹೇಳಿಕೆಯ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಹುಡುಕಿ ಬಂಧಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :