ಶ್ರೀನಗರ : ಭಿಂಬರ್ ಗಲಿ ಪ್ರದೇಶದ ಬಳಿ ನಡೆದ ಉಗ್ರರ ದಾಳಿ ವೇಳೆ ಯೋಧರ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಗ್ರೆನೇಡ್ ದಾಳಿಯ ಸಾಧ್ಯತೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸೇನೆ ಶಂಕಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಗೆ ಆಗಮಿಸಲಿದೆ. ಗುರುವಾರ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬರ್ ಗಲಿ ಪ್ರದೇಶದ ಬಳಿ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ