ನವದೆಹಲಿ : ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್ ವಲಯ’ ಎಂದು ಪರಿಗಣಿಸಬೇಕು, ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ ಈ