ಅತ್ಯಾಚಾರಕ್ಕೊಳಗಾದ ಬಾಲಕಿಯ ಪ್ರಕಾರ, ಮೂವರು ಶಿಕ್ಷಕರು ಖಾಲಿಯಾಗಿದ್ದ ಕ್ಲಾಸ್ ರೂಮ್ಗಳಲ್ಲಿ ಹಲವಾರು ಬಾರಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗೂ ಮಾಹಿತಿ ನೀಡದಂತೆ ಬೆದರಿಕೆಯೊಡ್ಡಿದ್ದರು ಎಂದು ಅಪ್ರಾಪ್ತ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಆಘಾತಕಾರಿ ಘಟನೆಯೊಂದರಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಮೂವರು ಶಿಕ್ಷಕರು ಗ್ಯಾಂಗ್ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಆರೋಪಿ ಶಿಕ್ಷಕರಾದ ಸಂಜಯ್ ಪಾಟೀಲ್(47),