ಲಕ್ನೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.17 ವರ್ಷದ ಬಾಲಕಿ ಕೊಲೆಗೀಡಾದವಳು. ತಂದೆ ಮತ್ತು ತಾಯಿ ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದರು. ತಂಗಿಯೂ ಮನೆಯಲ್ಲಿರಲಿಲ್ಲ.ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ದುರುಳರು ಮನೆಗೆ ಬಂದು ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. -Edited by Rajesh Patil