ಪಾಟ್ನಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಹಾಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಾಲಕಿಯನ್ನು ಅಪಹರಿಸಿದ್ದ ಆರೋಪಿಗಳು ಬಳಿಕ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಬಳಿಕ ಮಹಿಳೆಯೊಬ್ಬಳಿಗೆ 50 ಸಾವಿರ ರೂ.ಗೆ ಬಾಲಕಿಯನ್ನು ಮಾರಾಟ ಮಾಡಿದ್ದರು.ಬಳಿಕ ಆಕೆಯನ್ನು ಉತ್ತರಪ್ರದೇಶಕ್ಕೆ ಕರೆದೊಯ್ಯಲಾಗಿತ್ತು. ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿದ ಪೊಲೀಸರು ಉತ್ತರಪ್ರದೇಶದಿಂದ ಮಹಿಳೆಯ ವಶದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ.